ಧರ್ಮಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರ ನಿಯೋಗ
ಬೆಂಗಳೂರು, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ಕುರಿತು ನಡೆಯುತ್ತಿರುವ ಎಸ್‌ಐಟಿ ತನಿಖೆ ಹಾಗೂ ದೇಗುಲದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಕ್ತರ ಬೆಂಬಲಕ್ಕೆ ಬೆಂಗಳೂರಿನಿಂದ ಬಿಜೆಪಿ ಕಾರ್ಯಕರ್ತರು ನಿಯೋಗ ಧರ
ಧರ್ಮಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರ ನಿಯೋಗ


ಬೆಂಗಳೂರು, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ಕುರಿತು

ನಡೆಯುತ್ತಿರುವ ಎಸ್‌ಐಟಿ ತನಿಖೆ ಹಾಗೂ ದೇಗುಲದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಭಕ್ತರ ಬೆಂಬಲಕ್ಕೆ ಬೆಂಗಳೂರಿನಿಂದ ಬಿಜೆಪಿ ಕಾರ್ಯಕರ್ತರು ನಿಯೋಗ ಧರ್ಮಸ್ಥಳಕ್ಕೆ ತೆರಳಿದೆ.

ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಇಂದು ೩೦೦ಕ್ಕೂ ಅಧಿಕ ವಾಹನಗಳಲ್ಲಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

ವಿಶ್ವನಾಥ್ ನೇತೃತ್ವದ ತಂಡ ಇಂದು ಧರ್ಮಸ್ಥಳ ತಲುಪಿ ದೇವರ ದರ್ಶನ ಪಡೆದ ಬಳಿಕ ಅಲ್ಲಿಯೇ ವಾಸ್ತವ್ಯ ಹೂಡಲಿದೆ.

ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದ ಶಾಸಕರ ನಿಯೋಗವೂ ನಾಳೆ ಆ.17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ.

ಉಡುಪಿ, ಮಂಗಳೂರು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದಲ್ಲಿ ಪಾಲ್ಗೊಳ್ಳಲಿದ್ದಾರೆ. ನಿಯೋಗ ಧರ್ಮಾಧಿಕಾರಿಗಳನ್ನು ಭೇಟಿಯಾಗಿ ನೈತಿಕ ಬೆಂಬಲ ಸೂಚಿಸಲಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande