ಬಿಜೆಪಿ ವಿರುದ್ದ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಪ್ರಕರಣ ಕುರಿತು ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ
ಬಿಜೆಪಿ ವಿರುದ್ದ ಡಿ.ಕೆ.ಶಿವಕುಮಾರ್ ವಾಗ್ದಾಳಿ


ಬೆಂಗಳೂರು, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಪ್ರಕರಣ ಕುರಿತು ಅನಾಮಿಕ ವ್ಯಕ್ತಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಕುರಿತು ಪ್ರತಿಕ್ರಿಯಿಸಿ ಬಿಜೆಪಿಯವರು ಆರಂಭದಲ್ಲಿ ಏನೂ ಮಾತನಾಡಿರಲಿಲ್ಲ. ಈಗ ರಾಜಕಾರಣ ಮಾಡುತ್ತಿದ್ದಾರೆ. ಅವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ. ಇದು ಯಾರೊಬ್ಬರ ಆಸ್ತಿಯಲ್ಲ. ಅವರವರ ಭಕ್ತಿ, ನಂಬಿಕೆ ಭಾವನೆಗೆ ಸಂಬಂಧಿಸಿದ್ದು. ಬಿಜೆಪಿಯವರದ್ದು ರಾಜಕಾರಣ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದರು.

ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ, ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ, ಎಸ್ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ, ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ, ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande