ಬೆಂಗಳೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಪಾಸ್ ಬುಕ್ ಬಾಂಡ್ ವಿತರಣಾ ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದಾಗ ಅವರಿಗೆ ಸುಕನ್ಯಾ ಸಮೃದ್ಧಿ ಯೋಜನೆ ಅಡಿಯಲ್ಲಿ ಪ್ರತಿವರ್ಷ ಸರ್ಕಾರ ಹಣ ಭರಿಸಿ, 18 ವರ್ಷ ತುಂಬಿದ ನಂತರ ಒಂದು ಲಕ್ಷ ಇಪ್ಪತ್ತೆಂಟು ಸಾವಿರ, ಎರಡನೇಯ ಹೆಣ್ಣು ಮಗುವಿಗೆ ಒಂದು ಲಕ್ಷ ಹದಿನೆಂಟು ಸಾವಿರ ನೀಡಲಾಗುತ್ತದೆ. ಹೆಣ್ಣು ಮಕ್ಕಳ ಜೀವ ರಕ್ಷಣೆಗಾಗಿ ಸುಕನ್ಯಾ ಸಮೃದ್ಧಿ ಯೋಜನೆ ಜಾರಿಗೆ ತರಲಾಗಿದೆ. ಭವಿಷ್ಯದಲ್ಲಿ ಹೆಣ್ಣು ಮಕ್ಕಳ ಸ್ವಾವಲಂಬಿ ಜೀವನಕ್ಕೆ ನೆರವಾಗಿ ನಿಲ್ಲಲಿದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa