ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರ ಜಿಲ್ಲಾ ಪ್ರವಾಸ
ದಾವಣಗೆರೆ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೋಬಳ
ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರ ಜಿಲ್ಲಾ ಪ್ರವಾಸ


ದಾವಣಗೆರೆ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಆಗಸ್ಟ್ 17 ರಂದು ಬೆಳಿಗ್ಗೆ 10 ಗಂಟೆಗೆ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಹೋಬಳಿಯ ಕೊರಚರಹಟ್ಟಿಯಲ್ಲಿ ಪರಿಶಿಷ್ಟ ಜಾತಿಯ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸುವರು ಎಂದು‌ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande