ಬೆಂಗಳೂರು, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಕೆ.ಆರ್ ಮಾರುಕಟ್ಟೆ ಬಳಿಯ ನಗರ್ತಪೇಟೆಯ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ದುರಂತದಲ್ಲಿ ರಾಜಸ್ತಾನ ಮೂಲದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಇನ್ನೊಂದು ಮಹಡಿಯಲ್ಲಿದ್ದ ಸುರೇಶ್ ಎಂಬುವವರು ಮೃತಪಟ್ಟಿದ್ದಾರೆ.
ಕಟ್ಟಡದ ನೆಲಮಹಡಿಯ ಪ್ಲಾಸ್ಟಿಕ್ ಮ್ಯಾಟ್ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ವ್ಯಾಪಕವಾಗಿ ಹಬ್ಬಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಕಟ್ಟಡದ ಮೂರನೇ ಮಹಡಿಯಲ್ಲಿ ವಾಸಿಸುತ್ತಿದ್ದ ರಾಜಸ್ಥಾನ ಮೂಲದ ಮದನ್ ಕುಮಾರ್, ಅವರ ಪತ್ನಿ ಸಂಗೀತಾ ಹಾಗೂ ಮಕ್ಕಳು ವಿಹಾನ್ ಮತ್ತು ನಿತೇಶ್ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಇದೇ ವೇಳೆ ಮೊದಲ ಮಹಡಿಯಲ್ಲಿದ್ದ ಕಾರ್ಮಿಕ ಸುರೇಶ ಮೃತಪಟ್ಟಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳದಲ್ಲಿ ಅಂಬುಲೆನ್ಸ್‌ಗಳನ್ನ ನಿಯೋಜನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಟ್ಟಡದಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa