ನವದೆಹಲಿ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೆಹಲಿಯ ‘ಸದೈವ ಅಟಲ್’ ಸಮಾಧಿಗೆ ಭೇಟಿ ನೀಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಹಲವಾರು ನಾಯಕರು ಉಪಸ್ಥಿತರಿದ್ದರು. ವಾಜಪೇಯಿ ಅವರ ದತ್ತುಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಕೂಡ ಶ್ರದ್ಧಾಂಜಲಿ ಸಲ್ಲಿಸಿದರು.
ಪ್ರಧಾನಿ ಮೋದಿ ಅವರು ಅಟಲ್ ಜೀ ಅವರ ಸೇವಾ ಮನೋಭಾವ ಅಭಿವೃದ್ಧಿ ಹೊಂದಿದ ಹಾಗೂ ಸ್ವಾವಲಂಬಿ ಭಾರತಕ್ಕಾಗಿ ಸದಾ ಸ್ಫೂರ್ತಿಯಾಗಿದೆ ಎಂದಿದ್ದಾರೆ. ರಾಜನಾಥ್ ಸಿಂಗ್, ಜೆ.ಪಿ. ನಡ್ಡಾ ಹಾಗೂ ಅಮಿತ್ ಶಾ ತಮ್ಮ ಸಂದೇಶಗಳಲ್ಲಿ ವಾಜಪೇಯಿ ಅವರ ರಾಷ್ಟ್ರಸೇವೆ, ಪೋಖ್ರಾನ್ ಪರಮಾಣು ಪರೀಕ್ಷೆ ಮತ್ತು ಕಾರ್ಗಿಲ್ ಯುದ್ಧದ ವೇಳೆ ನೀಡಿದ ನಾಯಕತ್ವವನ್ನು ನೆನಪಿಸಿಕೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa