ಹುಬ್ಬಳ್ಳಿ ತಾಲೂಕು ಪಂಚಾಯತ ಸಾಮಾನ್ಯ ಸಭೆ
ಹುಬ್ಬಳ್ಳಿ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆಗಳು ಸೇರಿದಂತೆ ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಸರಿಯಾದ ಯೋಜನೆಗಳಿಗೆ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳ
TP meeting


ಹುಬ್ಬಳ್ಳಿ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆಗಳು ಸೇರಿದಂತೆ ಅವಶ್ಯಕ ಮೂಲಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ಮುಂದಾಗಬೇಕು. ಸರ್ಕಾರ ಬಿಡುಗಡೆ ಮಾಡುವ ಅನುದಾನವನ್ನು ಸರಿಯಾದ ಯೋಜನೆಗಳಿಗೆ ಸದ್ಬಳಕೆ ಮಾಡಿಕೊಳ್ಳಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಹೇಳಿದರು.

ಹುಬ್ಬಳ್ಳಿ ತಾಲೂಕು ಆಡಳಿತಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು,

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದರೆ ಸರಿಯಾದ ರೀತಿಯಲ್ಲಿ ನೀರು ಪೂರೈಕೆ ಆಗುತ್ತಿಲ್ಲ ಎಂದು ಸಾರ್ವಜನಿಕರು ದೂರುತ್ತಿದ್ದಾರೆ. ಅಲ್ಲದೇ ಕಲುಷಿತ ನೀರನ್ನು ಜನರಿಗೆ ಕುಡಿಯಲು ಒದಗಿಸಲಾಗುತ್ತಿದೆ ಎಂಬ ದೂರುಗಳು ಸಹ ಬಂದಿವೆ. ಆದಷ್ಟು ಬೇಗ ಈ ಸಮಸ್ಯೆಗಳನ್ನು ಪರಿಹರಿಸಿ, ಜನರಿಗೆ ಉತ್ತಮ ಶುದ್ಧ ಕುಡಿಯುವ ನೀರನ್ನು ಒದಗಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ಶಾಲಾ ಮಕ್ಕಳಿಗೆ ವಿತರಿಸಲಾಗುತ್ತಿರುವ ಬಾಳೆ ಹಣ್ಣುಗಳು ಗುಣಮಟ್ಟದಾಗಿರುವುದಿಲ್ಲ ಎಂಬ ದೂರುಗಳು ಬಂದಿವೆ. ಹೀಗಾಗಿ ಮಕ್ಕಳಿಗೆ ವಿತರಿಸುವ ಬಾಳೆಹಣ್ಣುಗಳನ್ನು ಪರೀಕ್ಷಿಸಿ, ಬಳಿಕ ವಿತರಣೆ ಮಾಡಲು ಅಧಿಕಾರಿಗಳು ಮುಂದಾಗಬೇಕು. ಕೆಲವು ಮಕ್ಕಳು ಹಾಲು ಸೇವನೆ ಮಾಡಲು ಹಿಂದೇಟು ಹಾಕುತ್ತಿರುವ ಪ್ರಕರಣಗಳು ಕೇಳಿ ಬಂದಿವೆ. ಹಾಲು ಸೇವನೆ ಮಾಡುವಂತೆ ಮಕ್ಕಳ ಮನವೊಲಿಸಬೇಕು. ಶಾಲಾ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಬಿಸಿಯೂಟ ವಿತರಣೆ ಮಾಡಬೇಕು. ಶಾಲಾ ಮಕ್ಕಳಿಗೆ ಸರಿಯಾಗಿ ಸಮವಸ್ತ್ರ ಶೂ ವಿತರಣೆ ಆಗುತ್ತಿರುವುದರ ಬಗ್ಗೆ ಗಮನ ಹರಿಸಬೇಕು. ಅಂಚಟಗೇರಿ, ಬುಡರಸಿಂಗಿ ಹಾಗೂ ಕುರಡಿಕೇರಿ ಗ್ರಾಮಗಳ ಶಾಲೆಗಳಿಗೆ ಶೀಟ್ ಅಳವಡಿಸಬೇಕಾಗಿದೆ. ಅಲ್ಲದೇ ಕುಸುಗಲ್ ಗ್ರಾಮದ ಶಾಲೆಗೆ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಬೇಕಿದೆ. ಕೋಳಿವಾಡ ಗ್ರಾಮದಲ್ಲಿರುವ ರಂಗ ಮಂದಿರಕ್ಕೆ ಶೀಟ್ ಹಾಗೂ ಪ್ಲೋರಿಂಗ್ ಮಾಡುವುದು ಅವಶ್ಯವಿದೆ. ಮಂಟೂರು ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ವಹಿಸಬೇಕಾಗಿದೆ. ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆ ತರುವ ನಿಟ್ಟಿನಲ್ಲಿ ವಿನೂತನ ಪ್ರಯತ್ನಗಳನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande