ಧಾರವಾಡ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ, ಅಲೆಮಾರಿ ಅಭಿವೃದ್ಧಿ ನಿಗಮದಿಂದ ನಾನಾ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್‍ನಲ್ಲಿ ಸೆಪ್ಟೆಂಬರ 10, 2025 ರೊಳಗಾಗಿ ಅರ್ಜಿ ಸಲ್ಲಿಸಬಹುದು. 2023-24 ಹಾಗೂ 2024-25ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಧಾರವಾಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa