ನಾನಾ ಯೋಜನೆಗಳಡಿ ಅರ್ಜಿ ಆಹ್ವಾನ
ವಿಜಯಪುರ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ನಾನಾ ಯೋಜನೆಗಳಡಿ ಅನುಷ್ಠಾನಗೊಳಿಸಲು ಅರ್ಹ ಅರ್ಜಿದಾರರಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ: 10-09-2025 ಕೊನೆಯ
ನಾನಾ ಯೋಜನೆಗಳಡಿ ಅರ್ಜಿ ಆಹ್ವಾನ


ವಿಜಯಪುರ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ನಾನಾ ಯೋಜನೆಗಳಡಿ ಅನುಷ್ಠಾನಗೊಳಿಸಲು ಅರ್ಹ ಅರ್ಜಿದಾರರಿಂದ ಆನಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ: 10-09-2025 ಕೊನೆಯ ದಿನವಾಗಿದೆ.ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ,ಬ್ಯಾಂಕಗಳ ಸಹಯೋಗದೊಂದಿಗೆ ಉದ್ಯಮ ಶೀಲತಾ ಯೋಜನೆ,ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

2023-24 ಹಾಗೂ 2024-25ರ ಅವಧಿಯಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ‌ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ‌ನಿರ್ದೇಶಕ ಮಹೇಶ ಪೋತದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande