ಶಿವಮೊಗ್ಗ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ನಗರ ಉಪವಿಭಾಗ-2 ರಲ್ಲಿ ಆ.18 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಇವರ ನೇತೃತ್ವದಲ್ಲಿ ನಗರದ ಎನ್.ಟಿ.ರಸ್ತೆ, ನ್ಯೂಮಂಡ್ಲಿಯಲ್ಲಿರುವ ಉಪ ವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ.
ಉಪ ವಿಭಾಗದ ವ್ಯಾಪ್ತಿಯ ಗ್ರಾಹಕರು ಸಭೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa