ನಾಳೆ ನೂತನ ಸರಕಾರಿ ಪ್ರೌಢಶಾಲೆಯ ಉದ್ಘಾಟನೆ
ಹುಬ್ಬಳ್ಳಿ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಛಬ್ಬಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ. ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು
School


ಹುಬ್ಬಳ್ಳಿ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದ ನೂತನ ಸರಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಛಬ್ಬಿ ಗ್ರಾಮದ ಸರಕಾರಿ ಪ್ರೌಢ ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ.

ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಶಾಸಕರಾದ ಎಂ.ಆರ್.ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು ಎಂದು ಛಬ್ಬಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande