ಅಜೀವ ಸದಸ್ಯತ್ವಕ್ಕೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ದಾವಣಗೆರೆ, 16 ಆಗಸ್ಟ್ (ಹಿ.ಸ.) : ಆ್ಯಂಕರ್ : ದಾವಣಗೆರೆಯ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಯ 15 ಸ್ಥಾನಗಳ ಪೈಕಿ 8 ಸ್ಥಾನಗಳ ಆಯ್ಕೆಗೆ ಚುನಾವಣೆಯನ್ನು (ತಾತ್ಕಾಲಿಕ) ಸೆಪ್ಟೆಂಬರ್ 14 ರಂದು ನಡೆಸಲಾಗುವುದು. ಅಜೀವ ಸದಸ್ಯತ್ವ ಪಟ್ಟಿಯನ್ನು ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ, ಇಂಡ
ಅಜೀವ ಸದಸ್ಯತ್ವಕ್ಕೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ


ದಾವಣಗೆರೆ, 16 ಆಗಸ್ಟ್ (ಹಿ.ಸ.) :

ಆ್ಯಂಕರ್ : ದಾವಣಗೆರೆಯ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಯ 15 ಸ್ಥಾನಗಳ ಪೈಕಿ 8 ಸ್ಥಾನಗಳ ಆಯ್ಕೆಗೆ ಚುನಾವಣೆಯನ್ನು (ತಾತ್ಕಾಲಿಕ) ಸೆಪ್ಟೆಂಬರ್ 14 ರಂದು ನಡೆಸಲಾಗುವುದು.

ಅಜೀವ ಸದಸ್ಯತ್ವ ಪಟ್ಟಿಯನ್ನು ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ, ಇಂಡಿಯನ್ ರೆಡ್ ಕ್ರಾಸ್ ಭವನ, ದೇವರಾಜ್ ಅರಸ್ ಬಡಾವಣೆ, ದಾವಣಗೆರೆ ಇಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಅಜೀವ ಸದಸ್ಯತ್ವಕ್ಕೆ ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 22 ಕೊನೆ ದಿನವಾಗಿರುತ್ತದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಲಿಖಿತವಾಗಿ ಕಚೇರಿಗೆ ಸಲ್ಲಿಸಬೇಕು. ಅಜೀವ ಸದಸ್ಯತ್ವ ಪಡೆದವರಿಗೆ ಮಾತ್ರ ಮತದಾನ ಮಾಡಲು ಹಾಗೂ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ.

ಆಗಸ್ಟ್ 23 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು. ಈ ಪಟ್ಟಿ ಪ್ರಕಟಣೆಯ ನಂತರ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande