ಯಲ್ಲಾಪುರ, 16 ಆಗಸ್ಟ್ (ಹಿ.ಸ.) :
ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಬಳಿ ಶುಕ್ರವಾರ ಮಧ್ಯರಾತ್ರಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಬಾಗಲಕೋಟೆಯ ನಿಲವ್ವ ಹರದೊಳ್ಳಿ (40), ಗಿರಿಜವ್ವಾ ಬೂದನ್ನವರ (30) ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಗಾಯಗೊಂಡಿರುವ ಇಬ್ಬರು ಬಾಲಕರ ಸ್ಥಿತಿ ಗಂಭೀರವಾಗಿದೆ.
ಬಸ್ ಬಾಗಲಕೋಟೆಯಿಂದ ಮಂಗಳೂರು ಕಡೆ ಹೊರಟಿದ್ದು, ವೇಗದಲ್ಲಿ ಲಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa