ಗದಗ, 16 ಆಗಸ್ಟ್ (ಹಿ.ಸ.)
ಆ್ಯಂಕರ್:- ಕರ್ಮಣ್ಯೇ ವಾಧಿಕಾರಸ್ಥೆ ಮಾ ಫಲೇಶು ಕದಾಚನಾ ಎಂಬ ಭಗವದ್ಗೀತೆಯ ಸಂದೇಶದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯಗಳನ್ನು ಪ್ರತಿಫಲಾಪೇಕ್ಷೆಯಿಲ್ಲದೇ ನಿಭಾಯಿಸಬೇಕು. ಈ ಸಂದೇಶವು ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ ಎಂದು ರಾಜ್ಯದ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ನುಡಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗದಗ ಇವರುಗಳ ಸಂಯುಕ್ತ ಸಹಯೋಗದಲ್ಲಿ ಭಗವಾನ್ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಕೃಷ್ಣ ಪರಮಾತ್ಮನು ಉಪದೇಶಿಸಿದ ಭಗವದ್ಗೀತೆಯು ವಿಶ್ವದಲ್ಲಿಯೇ ಅತೀ ಹೆಚ್ಚು ಪ್ರಸಿದ್ಧವಾಗಿವೆ. ಹಿಂದೂ ಸಂಸ್ಕೃತಿಯ ಪವಿತ್ರ ಗ್ರಂಥವಾಗಿದೆ. ಭಗವದ್ಗೀತೆ ಮೂಲಕ ಜನರಿಗೆ ಕೃಷ್ಣನು ನೀನು ಕರ್ತವ್ಯ ನಿಭಾಯಿಸು. ಪ್ರತಿಫಲ ಭಗವಂತನಿಗೆ ಬಿಡು ಎಂದು ಸಾರಿದ್ದಾನೆ. ಎಲ್ಲ ದೇವರನ್ನು ಒಂದೊಂದು ಜಾತಿಗೆ ಮಿತಿಗೊಳಿಸಲಾಗಿದೆ.
ಕೃಷ್ಣ ಎಂಬುವ ಹೆಸರು ದೇಶದಲ್ಲಿ ಅತೀ ಹೆಚ್ಚು ಬಳಸುವ ಪದವಾಗಿದೆ. ಬದುಕಿನ ಎಲ್ಲ ಕ್ಷೇತ್ರಗಳ ಕೆಲಸಗಳಿಗೆ ಕೃಷ್ಣ ಪರಮಾತ್ಮನನ್ನು ನೆನಪಿಸಿಕೊಡುತ್ತದೆ. ನನ್ನ ಸಾರ್ವಜನಿಕ ಬದುಕಿನಲ್ಲಿ ಕೃಷ್ಣ ಎಂಬ ಹೆಸರಿನ ರಾಜಕಾರಣಿ, ಕೃಷ್ಣ ನೀರಾವರಿ ಯೋಜನೆಯಿಂದ ನನ್ನ ರಾಜಕೀಯ ಜೀವನ ಮೇಲ್ಪಂಕ್ತಿಗೆ ಬರಲು ಕಾರಣವಾಗಿದೆ. ಗೊಲ್ಲರನ್ನು ಗುರುತಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಬದಲಾದ ಜಯಂತಿ ಸ್ವರೂಪ, ಈ ಮೊದಲು ಸರ್ಕಾರಿ ಅಧಿಕಾರಿಗಳ ನಡುವೆ ಮಾತ್ರ ಜಯಂತಿ ನಡೆಯುತ್ತಿದ್ದವು. ಈಗ ಜಯಂತಿ ಸ್ವರೂಪ ಬದಲಾಗಿತ್ತು ಖುಷಿ ತಂದಿದೆ. ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಇಂತಹ ಕಾರ್ಯಕ್ರಮ ಆಯೋಜನೆ ಮಾಡಿದ್ದಕ್ಕೆ ಅಭಿನಂದನಾರ್ಹ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಜಯಂತಿ ಮೂಲಕ ಸಮಾನತೆ ಸಾರುತ್ತಿದೆ ಎಂದು ಸಚಿವ ಎಚ್.ಕೆ.ಪಾಟೀಲ ನುಡಿದರು.
ಯಾದವ ಸಮುದಾಯದ ಅಧ್ಯಕ್ಷರಾದ ಹರೀಶ ಪೂಜಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಾವಿತ್ರಮ್ಮ ಹಟ್ಟಿ ಅವರ ಭಾಮಿನಿ ಕೀರ್ತನೆ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಾಗೂ ಎಸ್ ಎಸ್ ಎಲ್ ಸಿ , ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಗೊಲ್ಲ ಸಮುದಾಯದವರನ್ನು ಸನ್ಮಾನಿಸಲಾಯಿತು.
ಮುಳಗುಂದದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ರಮೇಶ ಮ ಕಲ್ಲನಗೌಡರ ಅವರು ಶ್ರೀ ಕೃಷ್ಣನ ಜೀವನ ಮತ್ತು ಸಂದೇಶದ ಕುರಿತು ಉಪನ್ಯಾಸ ನೀಡಿದರು. ಲಿಟಲ್ ಚಾಂಪ್ಸ್ ಸ್ಕೂಲ್‌ದ ಮಕ್ಕಳು ನೃತ್ಯ ಪ್ರಸ್ತುತ ಪಡಿಸಿದರು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಹಾತಲಗೇರಿ ಗ್ರಾ.ಪಂ. ಅಧ್ಯಕ್ಷ ರಾಮನಗೌಡ ಪಾಟೀಲ, ಮಾಜಿ ಶಾಸಕ ಡಿ.ಆರ್.ಪಾಟೀಲ,ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ವಿವಿಧ ಇಲಾಖೆಯ ಅಧಿಕಾರಿಗಳು, ಎಸ್.ಎನ್.ಬಳ್ಳಾರಿ, ಕಡೆಮನಿ, ಸಮುದಾಯದ ಹಿರಿಯರು, ಗಣ್ಯರು ಹಾಜರಿದ್ದರು.
ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಗದಗ ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣೀ ಸರ್ವರನ್ನು ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ವಂದಿಸಿದರು. ಬಾಹುಬಲಿ ಜೈನರ್ ಕಾರ್ಯಕ್ರಮ ನಿರ್ವಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP