ಬೆಂಗಳೂರು, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ), ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನದ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಅರ್ಜಿಗಳನ್ನು ಆನ್ ಲೈನ್ ಮೂಲಕ ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳ ಅರ್ಜಿಗಳನ್ನು ನೇರವಾಗಿ ವೆಬ್ ಸೈಟ್- https://sevasindhu.karnataka.gov.in ನಲ್ಲಿ ಅಥವಾ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಮೂಲಕ ಅಪ್ ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಅಥವಾ ದೂರವಾಣಿ: 080-29550603 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa