ವಿಜಯಪುರ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೈಕ್ ಸವಾರನೊಬ್ಬ ಹಿಂಬದಿಯ ಸವಾರನನ್ನು ಕೂರಿಸಿಕೊಂಡು ಅತಿವೇಗದಿಂದ ಬೈಕ್ ಚಲಾಯಿಸಿಕೊಂಡು ಹೋಗಿ ಬೇವಿನ ಮರಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ ಸವಾರ ಮೃತಪಟ್ಟು, ಹಿಂಬದಿ ಸವಾರ ಗಂಭೀರಗಾಯಗೊಂಡ ಘಟನೆ ಬಾಗಲಕೋಟೆಯ ಚವಡಾಪೂರ - ಅಂಬಲಿಕೊಪ್ಪ ರಸ್ತೆಯ ಬಾಗಮ್ಮ ದೇವಸ್ಥಾನದ ಹತ್ತಿರ ನಡೆದಿದೆ.
ಈ ಸಂಬಂಧ ಬಾಗಲಕೋಟ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .ಮೃತ ಸವಾರನನ್ನು ಮಂಜಪ್ಪ ಭಗವತಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಬಸವರಾಜ ಅಂಬಿಗೇರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೈಗೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande