ಜಮ್ಮು ಕಾಶ್ಮೀರದ ಜನತೆ ಜೊತೆಗೆ ಕೇಂದ್ರ ಸರಕಾರ : ಅಮಿತ್ ಶಾ
ನವದೆಹಲಿ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಂಭವಿಸಿದ ಮೇಘಸ್ಫೋಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ. ಅವರು ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಹಾಗೂ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸ
Amit sha


ನವದೆಹಲಿ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸಂಭವಿಸಿದ ಮೇಘಸ್ಫೋಟದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

ಅವರು ಈ ಕುರಿತು ಲೆಫ್ಟಿನೆಂಟ್ ಗವರ್ನರ್ ಹಾಗೂ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಆಡಳಿತ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಂಡಿದ್ದು, ಎನ್‌ಡಿಆರ್‌ಎಫ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಮೋದಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು ಖಚಿತಪಡಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಸಹೋದರ ಸಹೋದರಿಯರ ಬೆಂಬಲಕ್ಕೆ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande