ಚಾಮರಾಜನಗರ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಶಿಕ್ಷಣ ಭೀಷ್ಮ ಹೆಚ್.ಎಂ.ಗಂಗಾಧರಯ್ಯ ರವರ ಪ್ರತಿಮೆಯನ್ನು ಗೃಹ ಸಚಿವ ಜಿ.ಪರಮೇಶ್ವರ ಅನಾವರಣಗೊಳಿಸಿದರು.
ಇದೇ ವೇಳೆ ನೆನಪಿನ ಭವನ ಉದ್ಘಾಟಿಸಿ ಸಂಸ್ಕೃತಿ ಪ್ರಶಸ್ತಿ ಪ್ರಧಾನ ಮಾಡಿದರು.
ಕಾರ್ಯಕ್ರಮದಲ್ಲಿ ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ತುಮಕೂರಿನ ಸಾಹೇ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಗುರುಶಂಕರ್, ಜಾನಪದ ಕಲಾವಿದ ಲಕ್ಷ್ಮದಾಸ್, ಮುಖಂಡರಾದ ಹೆಚ್.ಎ.ವೆಂಕಟೇಶ್, ವಕೀಲರಾದ ಕಾಂತರಾಜ್ ಮುಂತಾದವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa