ಜಮ್ಮು ಕಾಶ್ಮೀರದ ಕಥುವಾದಲ್ಲಿ ಮೇಘಸ್ಪೋಟ
ಕಥುವಾ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಗ್ರಾಮದಲ್ಲಿ ಮಧ್ಯರಾತ್ರಿ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಘಟನೆಯಿಂದಾಗಿ ಗ್ರಾಮಕ್ಕೆ ಹೋಗುವ ರಸ್ತೆ ಮುಚ್
Cloudburst


ಕಥುವಾ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಗ್ರಾಮದಲ್ಲಿ ಮಧ್ಯರಾತ್ರಿ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಘಟನೆಯಿಂದಾಗಿ ಗ್ರಾಮಕ್ಕೆ ಹೋಗುವ ರಸ್ತೆ ಮುಚ್ಚಿಹೋಗಿದ್ದು, ಹಲವು ಮನೆಗಳು ಹಾಗೂ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಎಸ್‌ಡಿಆರ್‌ಎಫ್‌ ತಂಡ ತಲುಪಿ ಶೋಧ ಮತ್ತು ಪರಿಹಾರ ಕಾರ್ಯಾಚರಣೆ ಕೈಗೊಂಡಿವೆ.

ಇದರ ಹೊರತಾಗಿಯೂ ಬಗರ್, ಚಾಂಗ್ಡಾ ಮತ್ತು ದಿಲ್ವಾನ್-ಹುಟ್ಲಿ ಪ್ರದೇಶಗಳಲ್ಲಿ ಭೂಕುಸಿತಗಳಾದರೂ, ದೊಡ್ಡ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ತೀವ್ರ ಮಳೆಯಿಂದ ಉಜ್ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ನೀರಿನ ಮಟ್ಟ ನಿರಂತರ ಏರಿಕೆಯಾಗುತ್ತಿದೆ. ಜಿಲ್ಲಾಡಳಿತ ಜನರಿಗೆ ಜಲಾಶಯಗಳು ಹಾಗೂ ನದಿಗಳ ಸಮೀಪ ಹೋಗದಂತೆ ಎಚ್ಚರಿಕೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande