ಆ.20 ರಂದು ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ
ಹಾಸನ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆ.20 ರಂದು ಬೆ.11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಾಮಾಜಿಕ ಕ್ರಾಂತಿಯ ನೇತಾರ, ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾ
ಆ.20 ರಂದು ಡಿ.ದೇವರಾಜ ಅರಸು ಅವರ ಜನ್ಮದಿನಾಚರಣೆ


ಹಾಸನ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆ.20 ರಂದು ಬೆ.11 ಗಂಟೆಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಾಮಾಜಿಕ ಕ್ರಾಂತಿಯ ನೇತಾರ, ಪರಿವರ್ತನೆಯ ಹರಿಕಾರ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಬೆ.9.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹಾಸನಾಂಬ ಕಲಾಕ್ಷೇತ್ರದವರೆಗೆ ಬೆಳ್ಳಿ ರಥದಲ್ಲಿ ಡಿ.ದೇವರಾಜ ಅರಸುರವರ ಭಾವಚಿತ್ರ ಮೆರವಣಿಗೆ ಜಾಥವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande