ಬೆಂಗಳೂರಿನ ಕಟ್ಟಡಗಳ ಮಾಲಿಕರಿಗೆ ಡಿ.ಕೆ.ಶಿವಕುಮಾರ್ ಎಚ್ಚರಿಕೆ
ಬೆಂಗಳೂರು, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು,
Dks


ಬೆಂಗಳೂರು, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ನಗರ್ತರಪೇಟೆ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ಸ್ಥಳಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಿಗಳೊಂದಿಗೆ ತೆರಳಿ, ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕಾನೂನು ಪಾಲನೆ ಮಾಡದೇ ಚಿಕ್ಕ ಜಾಗದಲ್ಲಿ ಕಟ್ಟಡ ಕಟ್ಟಿದ್ದಾರೆ. ಕಟ್ಟಡ ನಿರ್ಮಾಣದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮನೆ ಮಾಲೀಕರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ಘಟನೆಯಲ್ಲಿ ಬಡವರು ಜೀವ ಕಳೆದುಕೊಂಡಿದ್ದಾರೆ. ಕಟ್ಟಡ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇದ್ದರೇ ಕಟ್ಟಡಗಳನ್ನು ತೆರವುಗೊಳಿಸಲಾಗುವುದು ಎಂದರು.

ಮುಂಬಯಿನಲ್ಲಿ ಕೂಡ ಇದೆ ಪರಿಸ್ಥಿತಿ ಇದೆ. ಅವಘಡ ಸಂಭವಿಸಿದಾಗ ಅಗ್ನಿಶಾಮಕ ವಾಹನಗಳು ಬರುವುದಕ್ಕೆ ಆಗುವುದಿಲ್ಲ ಹಾಗಾಗಿ ಕಟ್ಟಡಗಳನ್ನು ಸರಿ ಪಡಿಸಿಕೊಂಡು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಕಟ್ಟಡಗಳ ಮಾಲಿಕರಿಗೆ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande