ಗದಗ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನೊಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷವಾದ “ಶುಭ ಕರ್ನಾಟಕ” ಪಕ್ಷಕ್ಕೆ ಚುನಾವಣಾ ಆಯೋಗದಿಂದ ಶೋಕಾಸ್ ನೋಟೀಸ್ ಜಾರಿಗೊಳಿಸಲಾಗಿದೆ.
ಚುನಾವಣಾ ಆಯೋಗದಲ್ಲಿ 1951 ರ ಜನತಾ ಪ್ರಾತಿನಿಧ್ಯ ಕಾಯಿದೆ ಸೆಕ್ಷನ್ 29ಎ ಅನ್ವಯ ಸಂಘ , ಸಂಸ್ಥೆಯನ್ನು ರಾಜಕೀಯ ಪಕ್ಷವಾಗಿ ನೊಂದಾಯಿಸಲಾಗುತ್ತದೆ.
ನೊಂದಾಯಿಸಿದ ಅಂತಹ ಪಕ್ಷಗಳು ಚುನಾವಣೆಯಲ್ಲಿ ಭಾಗವಹಿಸಬೇಕು. ಆದರೆ 6 ವರ್ಷಗಳಿಂದ ಜನಪ್ರತಿನಿಧಿಗಳ ಸದನಗಳು, ವಿಧಾನಸಭೆ , ಲೋಕಸಭೆ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ “ ಶುಭ ಕರ್ನಾಟಕ “ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಮಾಡಿರುವುದು ಕಂಡುಬಂದಿಲ್ಲ.
ಎಲ್ಲ ದಾಖಲೆಗಳೊಂದಿಗೆ “ಶುಭ ಕರ್ನಾಟಕ” ಪಕ್ಷದ ಅಧ್ಯಕ್ಷರು ಅಥವಾ ಪ್ರಧಾನ ಕಾರ್ಯದರ್ಶಿಗಳು , ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಸೆಪ್ಟೆಂಬರ 1 ರೊಳಗೆ ಅಫಿಡವಿಟ್‌ನೊಂದಿಗೆ ಲಿಖಿತ ಹೇಳಿಕೆ ಸಲ್ಲಿಸಬೇಕು. ಉತ್ತರ ಬಾರದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಶೋಕಾಸ್ ನೋಟೀಸ್ ನೀಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP