ರಾಜ್ಯದಲ್ಲಿ ಶಿಕ್ಷಣ ಸೌಲಭ್ಯ ವಿಸ್ತರಣೆ : ಮಧು ಬಂಗಾರಪ್ಪ
ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ದೇವಾಲಯದ ಗಂಟೆಗಿಂತ ಶಾಲೆಯ ಗಂಟೆಗಳು ಹೆಚ್ಚು ಶಬ್ದ ಮಾಡಬೇಕು‌ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನೂತನ ಸರಕಾರಿ ಪ್ರೌಢಶಾಲೆ ಉದ್ಘಾಟಿಸಿ ಮಾತನಾಡಿದ ಅವ
Madhu Bangarappa


ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ದೇವಾಲಯದ ಗಂಟೆಗಿಂತ ಶಾಲೆಯ ಗಂಟೆಗಳು ಹೆಚ್ಚು ಶಬ್ದ ಮಾಡಬೇಕು‌ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನೂತನ ಸರಕಾರಿ ಪ್ರೌಢಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶಿಕ್ಷಕರು ಮತ್ತು ಶಾಲಾ ಕಟ್ಟಡಗಳ ಕೊರತೆ ಇದ್ದು, ಪ್ರಸಕ್ತ ಸಾಲಿನಲ್ಲಿ 3,000 ಹೊಸ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಕೆಪಿಎಸ್ ಶಾಲೆಗಳ ಮೂಲಕ ಮಕ್ಕಳಿಗೆ 1ರಿಂದ 12ನೇ ತರಗತಿ ತನಕ ಒಂದೇ ಶಾಲೆಯಲ್ಲಿ ಅಧ್ಯಯನದ ಅವಕಾಶ ಕಲ್ಪಿಸಲಾಗುವುದು ಎಂದರು.

6,500 ಗ್ರಾಮ ಪಂಚಾಯತಿಗಳಲ್ಲಿ ಕೆಪಿಎಸ್ ಶಾಲೆ ಸ್ಥಾಪನೆ ಗುರಿ ಹೊಂದಲಾಗಿದೆ. 4,000 ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಜಾರಿಯಾಗಲಿದ್ದು, 5,000 ಎಲ್‌ಕೆಜಿ-ಯುಕೆಜಿ ಶಾಲೆಗಳು ಆರಂಭಗೊಳ್ಳಲಿವೆ. ಜೊತೆಗೆ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಹಾಗೂ ಜೆಇಇ ತರಬೇತಿ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande