ಕಠ್ಮಂಡು, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಎರಡು ದಿನಗಳ ಭೇಟಿಗಾಗಿ ಭಾನುವಾರ ಕಠ್ಮಂಡುವಿಗೆ ಆಗಮಿಸಿದರು.
ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳ ವಿದೇಶಾಂಗ ಸಚಿವಾಲಯ ಹಾಗೂ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಅವರನ್ನು ಸ್ವಾಗತಿಸಿದರು.
ಭೇಟಿ ಸಂದರ್ಭದಲ್ಲಿ ಮಿಶ್ರಿ ಮೊದಲು ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರನ್ನು ಭೇಟಿ ಮಾಡಿ, ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಭಾರತದ ಭೇಟಿಗೆ ಸಂಬಂಧಿಸಿದ ಅಧಿಕೃತ ಆಹ್ವಾನ ಪತ್ರವನ್ನು ಹಸ್ತಾಂತರಿಸಲಿದ್ದಾರೆ.
ನಂತರ ಅವರು ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಅವರನ್ನು ಶೀತಲ್ ನಿವಾಸ್‌ನಲ್ಲಿ ಭೇಟಿಯಾಗಲಿದ್ದಾರೆ.
ಇದೆ ವೇಳೆ, ಮಿಶ್ರಿ ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಹಾಗೂ ಮಾಜಿ ಪ್ರಧಾನಿ, ಮಾವೋವಾದಿ ಅಧ್ಯಕ್ಷ ಪುಷ್ಪ ಕಮಲ್ ದಹಾಲ್ ‘ಪ್ರಚಂಡ’ ಅವರನ್ನು ಅವರ ನಿವಾಸಗಳಲ್ಲಿ ಭೇಟಿ ಮಾಡಲಿದ್ದಾರೆ.
ಇದಲ್ಲದೆ, ಅವರು ನೇಪಾಳದ ವಿದೇಶಾಂಗ ಸಚಿವೆ ಡಾ. ಅರ್ಜು ರಾಣಾ ಹಾಗೂ ವಿದೇಶಾಂಗ ಕಾರ್ಯದರ್ಶಿ ಅಮೃತ್ ರೈ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಈ ಮಾತುಕತೆಗಳಲ್ಲಿ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಪ್ರಧಾನಿ ಓಲಿ ಅವರ ಭಾರತ ಭೇಟಿಗೆ ಸಂಬಂಧಿಸಿದ ಕಾರ್ಯಸೂಚಿ ಅಂತಿಮಗೊಳ್ಳಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa