ಭೋಪಾಲ್, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮಧ್ಯ ಪ್ರದೇಶದ ವಿದಿಶಾದ ಚಿರ್ಖೇಡಾ ಗ್ರಾಮದಲ್ಲಿ ಸೋಯಾಬೀನ್ ಬೆಳೆಯು ನಿಷ್ಪರಿಣಾಮಕಾರಿ ಕೀಟನಾಶಕ ಸಿಂಪಡಣೆಯಿಂದ ಹಾನಿಗೊಳಗಾದ ಹಿನ್ನೆಲೆಯಲ್ಲಿ ಕೇಂದ್ರ ರೈತ ಕಲ್ಯಾಣ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ರೈತರು ನೀಡಿದ ದೂರುಗಳ ಆಧಾರದ ಮೇಲೆ ಸಚಿವರು ಹೊಲಗಳನ್ನು ಪರಿಶೀಲಿಸಿ, ಹಾನಿಗೊಳಗಾದ ರೈತರಿಗೆ ಸಾಧ್ಯವಿರುವ ಎಲ್ಲಾ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಕಳಪೆ ಹಾಗೂ ಅಪಾಯಕಾರಿ ಔಷಧಿಗಳನ್ನು ಮಾರಾಟ ಮಾಡುವ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa