ಬೆದರಿಕೆಗೆ ಹೆದರುವುದಿಲ್ಲ : ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್
ನವದೆಹಲಿ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಮತದಾರರ ಪಟ್ಟಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಕೆಲವು ಪಕ್ಷಗಳು ಈ ಕುರಿತಾಗಿ ತಪ್ಪು ಮಾಹಿತಿ ಹರಡುತ್ತಿರುವುದು ತೀವ್ರ ಕಳವಳಕಾರಿ ವಿಷಯವಾಗಿದೆ ಎಂದು ಮುಖ್ಯ ಚುನಾವಣಾ ಆಯು
EC


ನವದೆಹಲಿ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮತದಾರರ ಪಟ್ಟಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸಲು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ. ಆದರೆ ಕೆಲವು ಪಕ್ಷಗಳು ಈ ಕುರಿತಾಗಿ ತಪ್ಪು ಮಾಹಿತಿ ಹರಡುತ್ತಿರುವುದು ತೀವ್ರ ಕಳವಳಕಾರಿ ವಿಷಯವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎರಡು ಬಾರಿ ಮತದಾನ ಮತ್ತು ಮತಗಳ್ಳತನ ಆರೋಪಗಳು ಆಧಾರ ರಹಿತ ಎಂದಿದ್ದಾರೆ.

ಬಿಹಾರದ ಮತಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯನ್ನು ಪಾರದರ್ಶಕ ರೀತಿಯಲ್ಲಿ ಯಶಸ್ವಿಗೊಳಿಸಲು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಕೆಲವು ಪಕ್ಷಗಳು ಮತ್ತು ನಾಯಕರು ವಿಶೇಷ ತೀವ್ರ ಪರಿಷ್ಕರಣೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವುದು ಕಳವಳಕಾರಿ. ಬಿಹಾರದಲ್ಲಿ ಕರಡು ಮತದಾರರ ಪಟ್ಟಿಯ ಕುರಿತು ಹಕ್ಕು ಮತ್ತು ದೂರುಗಳನ್ನು ಸಲ್ಲಿಸಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಅವಕಾಶ ನೀಡಿದೆ. ಇದಕ್ಕೆ ಇನ್ನೂ 15 ದಿನ ಸಮಯಾವಕಾಶವಿದೆ ಎಂದು ತಿಳಿಸಿದರು.

ಚುನಾವಣಾ ಆಯೋಗದ ಬಾಗಿಲುಗಳು ಎಲ್ಲರಿಗೂ ಮುಕ್ತವಾಗಿವೆ ಮತ್ತು ಬೂತ್ ಮಟ್ಟದ ಅಧಿಕಾರಿಗಳು, ಏಜೆಂಟರು ಪಾರದರ್ಶಕ ರೀತಿಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ. ಆಡಳಿತ ಮತ್ತು ವಿರೋಧ ಪಕ್ಷಗಳು ಎರಡೂ ಚುನಾವಣಾ ಆಯೋಗದ ಮುಂದೆ ಸಮಾನ ಎಂದು ತಿಳಿಸಿದರು.

ಚುನಾವಣಾ ಆಯೋಗಕ್ಕೆ ದೂರು ನೀಡದೆ ಮತ ಕಳ್ಳತನ ಎಂದು ಆರೋಪ ಮಾಡಿದರೆ ಅದು ಭಾರತೀಯ ಸಂವಿಧಾನಕ್ಕೆ ಮಾಡುವ ಅವಮಾನ. ಓರ್ವ ವ್ಯಕ್ತಿ ಎರಡು ಬಾರಿ ಮತದಾನ ಎಂಬ ಆಧಾರರಹಿತ ಆರೋಪಗಳಿಗೆ ಚುನಾವಣಾ ಆಯೋಗ ಅಥವಾ ಮತದಾರರು ಹೆದರುವುದಿಲ್ಲ. ಕೆಲವರು ಮಾಡುವ ರಾಜಕೀಯದ ಬಗ್ಗೆ ತಲೆಕೆಡಿಸಿಕೊಳ್ಳದೆ ಚುನಾವಣಾ ಆಯೋಗ ಎಲ್ಲಾ ವರ್ಗದ ಮತದಾರರೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande