11,000 ಕೋಟಿ ರೂ. ಮೌಲ್ಯದ ಎರಡು ಹೆದ್ದಾರಿ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ
ನವದೆಹಲಿ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೆಹಲಿಯ ರೋಹಿಣಿಯಲ್ಲಿ ಸುಮಾರು ₹11,000 ಕೋಟಿ ಮೌಲ್ಯದ ಎರಡು ಪ್ರಮುಖ ಹೆದ್ದಾರಿ ಯೋಜನೆಗಳಾದ ದ್ವಾರಕಾ ಎಕ್ಸ್‌ಪ್ರೆಸ್‌ವೇ ಮತ್ತು ಅರ್ಬನ್ ಎಕ್ಸ್‌ಟೆನ್ಶನ್ ರೋಡ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರಸ್ತೆ ಸ
Pm


ನವದೆಹಲಿ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೆಹಲಿಯ ರೋಹಿಣಿಯಲ್ಲಿ ಸುಮಾರು ₹11,000 ಕೋಟಿ ಮೌಲ್ಯದ ಎರಡು ಪ್ರಮುಖ ಹೆದ್ದಾರಿ ಯೋಜನೆಗಳಾದ

ದ್ವಾರಕಾ ಎಕ್ಸ್‌ಪ್ರೆಸ್‌ವೇ ಮತ್ತು ಅರ್ಬನ್ ಎಕ್ಸ್‌ಟೆನ್ಶನ್ ರೋಡ್

ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ, ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ಕೇಂದ್ರ ಸಚಿವರು ಹಾಗೂ ದೆಹಲಿ ಸರ್ಕಾರದ ಸಚಿವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ನಿತಿನ್ ಗಡ್ಕರಿ ಅವರು ಪ್ರಧಾನಿ ಮೋದಿಗೆ ಶ್ರೀಗಂಧದ ಮರದ ರಾಧಾ-ಕೃಷ್ಣ ಪ್ರತಿಮೆ ನೀಡಿ ಗೌರವಿಸಿದರು.

ಬಳಿಕ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಹರಿಯಾಣ ಮುಖ್ಯಮಂತ್ರಿ ನೈಬ್ ಸಿಂಗ್ ಸೈನಿ ತಮ್ಮ ಭಾಷಣದಲ್ಲಿ ಪ್ರಧಾನಿಯವರ ನೇತೃತ್ವವನ್ನು ಶ್ಲಾಘಿಸಿ ದೆಹಲಿ-ಎನ್‌ಸಿಆರ್ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆ ಎಂದು ಹೇಳಿದರು.

ಈ ಎರಡೂ ಯೋಜನೆಗಳು ಎನ್ ಸಿಆರ್ ಪ್ರದೇಶದಲ್ಲಿ ಸಂಚಾರ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಸರಕುಗಳ ವೇಗವಾದ ಸಾರಿಗೆ ಹಾಗೂ ಜನರ ಸುಲಭ ಪ್ರಯಾಣಕ್ಕೆ ಸಹಕಾರಿ ಆಗಲಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande