ವಿಜಯಪುರ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಸಾಗಾಟ ವೇಳೆ ಪೊಲೀಸರು ಹಾಗೂ ಆಹಾರ ನೀರಿಕ್ಷಕ ಅಧಿಕಾರಿಗಳು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ನಡೆದಿದೆ.
ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. 75,110 ಮೌಲ್ಯದ 2590 ಕೆಜಿ ಅಕ್ಕಿ ಹಾಗೂ ಮೂರು ಲಕ್ಷದ ಗೂಡ್ಸ್ ವಾಹನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande