ಗದಗ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಅಂಚೆ ಇಲಾಖೆಯಿಂದ 6 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸಲು ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯು ಮಕ್ಕಳಿಗೆ ಅಂಚೆ ಚೀಟಿಗಳ ಮಹತ್ವ ಮತ್ತು ಸಂಗ್ರಹದ ಹವ್ಯಾಸ ಬೆಳೆಸುವ ಗುರಿಯನ್ನು ಹೊಂದಿರುತ್ತದೆ.
ಮಕ್ಕಳು 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶೇ.60 ರಷ್ಟು ಅಂಕವನ್ನು ಗಳಿಸಿರಬೇಕು. ಕಡ್ಡಾಯವಾಗಿ ಮಕ್ಕಳು ಅಂಚೆ ಚೀಟಿ ಠೇವಣಿ ಖಾತೆಯನ್ನು ಅಥವಾ ಅಂಚೆ ಚೀಟಿ ಕ್ಲಬ್ಬಿನ ಸದಸ್ಯರಾಗಿರಬೇಕು. ಅಂಚೆ ಚೀಟಿ ಬಹು ಆಯ್ಕೆ ಲಿಖಿತ ಪರೀಕ್ಷೆ ಮತ್ತು ಅಂಚೆ ಚೀಟಿ ಸಂಗ್ರಹ ಪ್ರಾಜೆಕ್ಟನ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ರೂಪಾಯಿ. 6000/- ವಿದ್ಯಾರ್ಥಿವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 4 ಕೊನೆಯ ದಿನಾಂಕವಾಗಿದೆ. ಗದಗ ಶೈಕ್ಷಣಿಕ ಜಿಲ್ಲೆಯ ಆಸಕ್ತ ವಿದ್ಯಾರ್ಥಿಗಳು ಮತ್ತು ಶಾಲೆಗಳು ಮೊಬೈಲ್ ನಂಬರಗೆ ಸಂಪರ್ಕಿಸಬಹುದು 9886117229 ಎಂದು ಗದಗ ವಿಭಾಗದ ಅಂಚೆ ಅಧೀಕ್ಷಕರಾದ ರಮೇಶ ಮಡಿವಾಳರ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಭೇಟಿ ನೀಡಬಹುದು.
ಹಿಂದೂಸ್ತಾನ್ ಸಮಾಚಾರ್ / lalita MP