ತಾಯ್ನಾಡಿಗೆ ಮರಳಿದ ಶುಭಾಂಶು ಶುಕ್ಲಾ
ನವದೆಹಲಿ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಬಳಿಕ ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಕೇಂದ್ರ ಸಚಿವ ಜಿತ
Return


ನವದೆಹಲಿ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ ಬಳಿಕ ತಾಯ್ನಾಡಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಶುಕ್ಲಾ ಅವರ ಸಹಾಯಕ ಗಗನಯಾತ್ರಿ ಪ್ರಶಾಂತ್ ಬಾಲಕೃಷ್ಣನ್ ನಾಯರ್ ಕೂಡ ತಾಯ್ನಾಡಿಗೆ ಮರಳಿದ್ದು, ಅವರಿಗೂ ಸ್ವಾಗತ ಕೋರಲಾಯಿತು.

ಕಳೆದ ಒಂದು ವರ್ಷದಿಂದ ಶುಭಾಂಶು ಶುಕ್ಲಾ ಅವರು ಅಮೆರಿಕದಲ್ಲಿದ್ದು, ಐಎಸ್​ಎಸ್​ಗೆ ಆಕ್ಸಿಯಂ-4 ಮಿಷನ್​ ತರಬೇತಿ ಪಡೆದಿದ್ದರು. ಬಳಿಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಶಸ್ವಿ ಪ್ರಯಾಣ ಕೈಗೊಂಡಿದ್ದರು.

ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ತಮ್ಮ ತವರೂರು ಲಕ್ನೋಗೆ ಪ್ರಯಾಣಿಸುವ ಸಾಧ್ಯತೆಯಿದೆ. ನಂತರ ಆಗಸ್ಟ್ 22 ಹಾಗೂ 23 ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ರಾಷ್ಟ್ರ ರಾಜಧಾನಿಗೆ ಮರಳುವ ಸಾಧ್ಯತೆಯಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande