ಶಿವಮೊಗ್ಗ, 17 ಆಗಸ್ಟ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2022ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ತಾತ್ಕಾಲಿಕ ಪಟ್ಟಿಯನ್ನು ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಕಚೇರಿಯಲ್ಲಿ ಮತ್ತು ಇಲಾಖೆಯ ಅಧಿಕೃತ ವೆಬ್‌ಸೈಟ್ dpl.karnataka.gov.in ರಲ್ಲಿ ಪ್ರಕಟಿಸಲು ಕ್ರಮ ಕೈಗೊಳ್ಳಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಆಯುಕ್ತರು, ಸಾರ್ವಜನಿಕರ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಆ.30ರೊಳಗಾಗಿ ಸಲ್ಲಿಸುವಂತೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈ ಪುಸ್ತಕಗಳ ಪ್ರದರ್ಶನವನ್ನು ಆ.20 ರಿಂದ 22 ವರೆಗೆ ಡಾ. ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ.ಬಡಾವಣೆ, ಡಾ. ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ, ವಿಜಯನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗುವುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa