ಸತ್ಯದ ಬಾಗಿಲು ತೆರೆಯಲಿದೆ, ಧರ್ಮದ ಬೆಳಕು ಬೆಳಗಲಿದೆ : ವಿಜಯೇಂದ್ರ
ಧರ್ಮಸ್ಥಳ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರಾವಳಿ ಭಾಗದ ಬಿಜೆಪಿ ಶಾಸಕರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯವರ ದರ್ಶನಾಶೀರ್ವಾದ ಪಡೆದು, ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ನಾಡಿನ ಕೋಟ್ಯಂತರ ಭಕ್
Byv


Byv


ಧರ್ಮಸ್ಥಳ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರಾವಳಿ ಭಾಗದ ಬಿಜೆಪಿ ಶಾಸಕರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯವರ ದರ್ಶನಾಶೀರ್ವಾದ ಪಡೆದು, ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

ನಾಡಿನ ಕೋಟ್ಯಂತರ ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರ ವಿರುದ್ಧ ಧರ್ಮಸ್ಥಳದ ಶ್ರೇಷ್ಠತೆಯನ್ನು ಎತ್ತಿ ಹಿಡಿಯಲು ಬಿಜೆಪಿ ಕಟ್ಟಿಬದ್ಧವಾಗಿ ಧರ್ಮಸ್ಥಳದ ಭಕ್ತರ ದನಿಯಾಗಿ ನಿಲ್ಲಲಿದೆ ಎಂದು ವಿಜಯೇಂದ್ರ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಎಸ್ಐಟಿ ತನಿಖೆಯನ್ನು ಯಾರು ವಿರೋಧಿಸಿಲ್ಲ, ಸತ್ಯದ ಬಾಗಿಲು ತೆರೆಯಲಿದೆ, ಧರ್ಮಸ್ಥಳದ ಧರ್ಮದ ಬೆಳಕು ಬೆಳಗಲಿದೆ. ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ವಿರುದ್ಧ ನಡೆಯುವ ಷಡ್ಯಂತ್ರಗಳಿಗೆ ಇನ್ನುಮುಂದೆ ತಕ್ಕ ಉತ್ತರ ಸಿಗಲಿದೆ. ರಾಜ್ಯ ಸರ್ಕಾರ ಧರ್ಮಸ್ಥಳದ ಹೆಸರಿನಲ್ಲಿ ಆಸಕ್ತ ಹಿತಾಸಕ್ತಿಗಳು ಸೃಷ್ಟಿಸಿರುವ ಗೊಂದಲಕ್ಕೆ ಅಂತಿಮ ತೆರೆ ಎಳೆಯುವ ನಿಟ್ಟಿನಲ್ಲಿ ಈವರೆಗಿನ ಎಸ್ಐಟಿ ತನಿಖೆಯ ವರದಿಯನ್ನು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande