ವರೂರು ಕ್ಷೇತ್ರ ವಿದ್ಯಾ ಕೇಂದ್ರವಾಗಿ ಬೆಳೆಯುತ್ತಿದೆ : ಬೊಮ್ಮಾಯಿ
ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.) : ಆ್ಯಂಕರ್ : ವರೂರು ಕ್ಷೇತ್ರ ವಿದ್ಯಾ ಕೇಂದ್ರವಾಗಿ ಬೆಳೆದಿದ್ದು, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ರಾಷ್ಟ್ರಸಂತ ಆಚಾರ್ಯ 108 ಗುಣಧರನಂದಿ ಮಹಾರಾಜರು ಕ್ರಾಂತಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ತ
Bommayi


ಹುಬ್ಬಳ್ಳಿ, 17 ಆಗಸ್ಟ್ (ಹಿ.ಸ.) :

ಆ್ಯಂಕರ್ : ವರೂರು ಕ್ಷೇತ್ರ ವಿದ್ಯಾ ಕೇಂದ್ರವಾಗಿ ಬೆಳೆದಿದ್ದು, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ರಾಷ್ಟ್ರಸಂತ ಆಚಾರ್ಯ 108 ಗುಣಧರನಂದಿ ಮಹಾರಾಜರು ಕ್ರಾಂತಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹುಬ್ಬಳ್ಳಿ ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ ಎ.ಜಿ.ಎಂ.ಆರ್ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದ ನೂತನ ಕಟ್ಟಡದ ನವರತ್ನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಗುಣಧರನಂದಿ ಮಹಾರಾಜರ ಆಶೀರ್ವಾದದಿಂದ ವರೂರು ವಿದ್ಯಾ ಕೇಂದ್ರವಾಗಿ ರೂಪಾಂತರಗೊಂಡಿದೆ. ಬಡವರ್ಗ ಹಾಗೂ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಅವರು ಶ್ರಮಿಸುತ್ತಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande