ಮಂಗಳೂರು, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಅವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದೆ.
ಈ ಹಿನ್ನೆಲೆ ಸೋಮವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಎಚ್ಚರಿಕೆ ಘೋಷಣೆ ಮಾಡಲಾಗಿದೆ. .
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa