ಹೈದರಾಬಾದ್, 18 ಆಗಸ್ಟ್ (ಹಿ.ಸ.) :
ಆ್ಯಂಕರ್ : ಹೈದರಾಬಾದ್‌ನ ರಾಮನಾಥಪುರದ ಗೋಕುಲನಗರದಲ್ಲಿ ಕೃಷ್ಣ ಜನ್ಮಾಷ್ಟಮಿ ಮೆರವಣಿಗೆ ವೇಳೆ ರಥವೊಂದು ವಿದ್ಯುತ್ ತಂತಿಗೆ ತಗುಲಿ ಐದು ಜನರು ಸಾವನ್ನಪ್ಪಿದ್ದಾರೆ.
ಭಾನುವಾರ ಮಧ್ಯರಾತ್ರಿ ಮೆರವಣಿಗೆ ಮುಕ್ತಾಯಗೊಳ್ಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ನಾಲ್ವರು ತೀವ್ರವಾಗಿ ಸುಟ್ಟು ಕರಕಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕೃಷ್ಣ ಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರವಿಕಾಸ್ (39) ಮತ್ತು ರಾಜೇಂದ್ರ ರೆಡ್ಡಿ (45) ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa