ವಿಜಯಪುರ, 02 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸಿಇಟಿ-ಎನ್‌ಇಇಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ಗಳಾದ ಪಿಎಚ್‌ಡಿಯಲ್ಲಿ ವ್ಯಾಸಂಗ ಮಾಢುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ 1 ಲಕ್ಷ ರೂ.ಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಆಸಕ್ತ ಅರ್ಹರು ವೆಬ್‌ಸೈಟ್ www.kacdc.karnataka.gov.in ಮೂಲಕ ದಿನಾಂಕ: 31-10-2025 ರೊಳಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 08352-258128 ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande