ವಿಜಯಪುರ, 02 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ 2026-27ನೇ ಸಾಲಿನಲ್ಲಿ 9 ಹಾಗೂ 11ನೇ ತರಗತಿಗಳಿಗೆ ಖಾಲಿ ಉಳಿಯುವ ಸ್ಥಾನಗಳಿಗೆ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ವೆಬ್‌ಸೈಟ್https://cbseitms.nic.in/2025/nvsix or https://cbseitms.nic.in/2025/nvsxi ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : 23-09-2025 ಕೊನೆಯ ದಿನವಾಗಿದ್ದು, ಪ್ರವೇಶ ಪರೀಕ್ಷೆಗಳು ದಿನಾಂಕ : 07-02-2026 ರಂದು ಜರುಗಲಿವೆ ಎಂದು ಆಲಮಟ್ಟಿ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande