ಬೆಂಗಳೂರು, 2 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜ್ಯದಲ್ಲಿ ಕುಸಿದು ಹೋಗಿರುವ ಕಾನೂನು ಸುವ್ಯವಸ್ಥೆಯ ವಿರುದ್ಧ ಸಾಂವಿಧಾನಿಕ ರೀತಿಯಲ್ಲಿ ಪ್ರತಿಭಟಿಸಲು ಅನುಮತಿ ಕೇಳಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ನಿರಾಕರಿಸಿದೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಸುಳ್ಳು ಆರೋಪಗಳನ್ನಿಟ್ಟುಕೊಂಡು ರಾಹುಲ್ ಗಾಂಧಿ ನೇತೃತ್ವದ ಪ್ರತಿಭಟನೆಗೆ ಅವಕಾಶ ಕಲ್ಪಿಸಿ ಬಿಜೆಪಿ ಹೋರಾಟಕ್ಕೆ ತಡೆಯೊಡ್ಡಿರುವುದು ಖಂಡನೀಯ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ, ಸಂವಿಧಾನಕ್ಕೆ ಬೆಲೆಯೇ ಇಲ್ಲದಂತಾಗಿದೆ. ವಿರೋಧ ಪಕ್ಷದ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa