ಬೆಂಗಳೂರು, 2 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಹುಲ್ ಗಾಂಧಿಯವರ ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಆಗಸ್ಟ್ 5 ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರು ಬರುತ್ತಾರೆಂಬ ಕಾರಣಕ್ಕೆ ರಾಜ್ಯ ಸರ್ಕಾರವು ಸ್ವಾತಂತ್ರ್ಯ ಉದ್ಯಾನವನದಲ್ಲಿನ ಕಾಂಪೌಂಡ ಗೋಡೆ ಒಡೆದಾಕಿದ್ದಲ್ಲದೆ ಮರಗಳನ್ನೂ ಕಡಿದಾಕಿರುವುದು ಅಕ್ಷಮ್ಯ ಅಪರಾಧ. ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa