ಬಳ್ಳಾರಿ : ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಬಿಳ್ಕೋಡುಗೆ
ಬಳ್ಳಾರಿ, 2 ಆಗಸ್ಟ್ (ಹಿ.ಸ.): ಆ್ಯಂಕರ್: ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿ ವರ್ಗಾವಣೆ ಆಗಿರುವ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ಕಚೇರಿ ಅಧೀಕ್ಷಕ ರವಿಕುಮಾರ್ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ
ಬಳ್ಳಾರಿ : ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗೆ ಬಿಳ್ಕೋಡುಗೆ


ಬಳ್ಳಾರಿ, 2 ಆಗಸ್ಟ್ (ಹಿ.ಸ.):

ಆ್ಯಂಕರ್:

ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಿ ವರ್ಗಾವಣೆ ಆಗಿರುವ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್. ದಾಸಪ್ಪನವರ, ಕಚೇರಿ ಅಧೀಕ್ಷಕ ರವಿಕುಮಾರ್ ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಬೀಳ್ಕೊಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು, ಜಿಲ್ಲಾ ಐಇಸಿ ವಿಭಾಗದ ಮುಖ್ಯಸ್ಥರಾಗಿದ್ದ ಈಶ್ವರ್ ಎಚ್. ದಾಸಪ್ಪ ಅವರು ಸ್ನೇಹಪರರಾಗಿದ್ದು ಅತ್ಯುತ್ತಮ ರೀತಿಯಲ್ಲಿ ಕರ್ತವ್ಯವನ್ನು ನಿರ್ವಹಿಸಿದ್ದಾರೆ. ರವಿಚಂದ್ರ ಮತ್ತು ನವೀನ್ ಕುಮಾರ್ ಅವರು ಅಚ್ಚುಕಟ್ಟಾಗಿ ತಮ್ಮ ಕಾರ್ಯವನ್ನು ನಿರ್ವಹಿಸಿದ್ದಾರೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande