ಧಾರವಾಡ, 2 ಆಗಸ್ಟ್ (ಹಿ.ಸ.):
ಆ್ಯಂಕರ್:ಧಾರವಾಡ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ್ ಪಾಟೀಲ್ ಶನಿವಾರ ಅರವಟಗಿ ಹಾಗೂ ಬೆಣಚಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಜಲಜೀವನ ಮಿಷನ್, ನರೇಗಾ ಯೋಜನೆಗಳಡಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಅವರಟಗಿಯಲ್ಲಿ ಕುಡಿಯುವ ನೀರಿನ ಪೈಪ್ಲೈನ್, ಮೀಟರ್ ಸ್ಥಾಪನೆ, ನೀರಿನ ಗುಣಮಟ್ಟ ಹಾಗೂ ರಸ್ತೆ ಪುನಸ್ಥಾಪನೆ ಕಾಮಗಾರಿಗಳನ್ನು ವೀಕ್ಷಿಸಿದರು. ಹೊಸ ಅಂಗನವಾಡಿ ಕಟ್ಟಡದ ಸ್ಥಿತಿಯನ್ನು ಪರಿಶೀಲಿಸಿದರು.
ಬೆಣಚಿಯಲ್ಲಿ ಡಿಜಿಟಲ್ ಗ್ರಂಥಾಲಯ, ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಮತ್ತು ಬೆಣಚಿ ಕೆರೆಯ ಸೌಂದರ್ಯಕರಣ, ಜಲ ಸಂರಕ್ಷಣಾ ಕಾಮಗಾರಿಗಳ ಪರಿಶೀಲನೆ ನಡೆಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಸ್ಥಳೀಯ ಅಧಿಕಾರಿಗಳು, ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa