ತುಮಕೂರು, 2 ಆಗಸ್ಟ್ (ಹಿ.ಸ.):
ಆ್ಯಂಕರ್:
ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳ್ಳತನದ ವಿರುದ್ಧ ಆಗಸ್ಟ್ 5ರಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ‌್‌ನಲ್ಲಿ ನಡೆಯಲಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಮುಖಂಡರುಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದರು.
ಸಭೆಯಲ್ಲಿ ಗುಬ್ಬಿ ಶಾಸಕರಾದ ಎಸ್.ಆರ್.ಶ್ರೀನಿವಾಸ್, ಪಾವಗಡ ಶಾಸಕರಾದ ಹೆಚ್.ವಿ.ವೆಂಕಟೇಶ್, ಕೆಪಿಸಿಸಿ ಉಪಾಧ್ಯಕ್ಷರಾದ ಮುರಳಿಧರ್ ಹಾಲಪ್ಪ, ಸೈಯದ್ ಅಹ್ಮದ್ ಹುಸೇನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಇಬ್ರಾಹಿಂ ಖಲೀಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಮಾಜಿ ಶಾಸಕರಾದ ಗಂಗ ಹನುಮಯ್ಯ, ಡಾ. ರಫೀಕ್ ಅಹ್ಮದ್, ಕಿರಣ್ ಕುಮಾರ್, ಮುಖಂಡರಾದ ಇಕ್ಬಾಲ್ ಅಹ್ಮದ್, ಗೋವಿಂದರಾಜು ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಖಂಡರುಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa