ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯವು ಒಂದು ನಾಣ್ಯದ ಎರಡು ಮುಖಗಳು : ಡಾ. ವಿಶ್ವನಾಥ್
ಹಂಪಿ, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಅಭಿವೃದ್ಧಿ ಎಂದರೆ ಕೇವಲ ಆರ್ಥಿಕ ಬೆಳವಣಿಗೆಯಲ್ಲ, ಅದು ಜನಸಾಮಾನ್ಯರಿಗೆ ತಲುಪುವ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಮಾನವೀಯ ಆಯಾಮಗಳನ್ನು ಒಳಗೊಂಡಿರುವ ಸಮಗ್ರ ಪ್ರಕ್ರಿಯೆಯಾಗಿದೆಂದು ಡಾ.ಬಿ.ಆರ್ .ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ ಕು
ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯವು ಒಂದು ನಾಣ್ಯದ ಎರಡು ಮುಖಗಳು : ಡಾ. ವಿಶ್ವನಾಥ್


ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯವು ಒಂದು ನಾಣ್ಯದ ಎರಡು ಮುಖಗಳು : ಡಾ. ವಿಶ್ವನಾಥ್


ಹಂಪಿ, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅಭಿವೃದ್ಧಿ ಎಂದರೆ ಕೇವಲ ಆರ್ಥಿಕ ಬೆಳವಣಿಗೆಯಲ್ಲ, ಅದು ಜನಸಾಮಾನ್ಯರಿಗೆ ತಲುಪುವ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಮಾನವೀಯ ಆಯಾಮಗಳನ್ನು ಒಳಗೊಂಡಿರುವ ಸಮಗ್ರ ಪ್ರಕ್ರಿಯೆಯಾಗಿದೆಂದು ಡಾ.ಬಿ.ಆರ್ .ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ವಿಶ್ವನಾಥ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಕನ್ನಡ ವಿಶ್ವವಿದ್ಯಾನಿಲಯದ ಅಭಿವೃದ್ಧಿ ಅಧ್ಯಯನ ವಿಭಾಗದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಎನ್ನುವ ವಿಶೇಷ ಉಪನ್ಯಾಸದಲ್ಲಿ ಮಾತನಾಡುತ್ತಾ, 75 ವರ್ಷಗಳಿಂದ ಆರ್ಥಿಕ, ರಾಜಕೀಯ, ಸಾಮಾಜಿಕ ಹಾಗೂ ಸಮಾನತೆಯ ಅಭಿವೃದ್ಧಿ ಪರಿಕಲ್ಪನೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅದು ಬಂಡವಾಳ ಶಾಹಿಗಳ ಕೈ ಸೇರಿದ್ದು, ಅಭಿವೃದ್ಧಿ ಎಂದರೆ ಜನಸಾಮಾನ್ಯರ ಜೀವನಮಟ್ಟ ಸುಧಾರಿಸುವುದು, ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳ ಲಭ್ಯತೆ ಹೆಚ್ಚಿಸುವುದು, ಬಡತನ ನಿರ್ಮೂಲನೆ, ಪರಿಸರ ಸಂರಕ್ಷಣೆ ಮತ್ತು ಭವಿಷ್ಯದ ಪೀಳಿಗೆಯ ಅಗತ್ಯಗಳನ್ನು ಪೂರೈಸಿದಾಗ ನಿಜವಾದ ಅಭಿವೃದ್ಧಿಯಾಗುತ್ತದೆಂದು ತಿಳಿಸಿದರು.

ಪ್ರಮುಖವಾಗಿ ಸಾಮಾಜಿಕ ನ್ಯಾಯದ ಅರ್ಥವೆಂದರೆ ಸಮಾನತೆ, ಮಾನವೀಯತೆ ಮತ್ತು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದಾಗಿದೆ. ಅಭಿವೃದ್ಧಿಯು ಕೇವಲ ಹಣದ ಅಥವಾ ಮೂಲಸೌಕರ್ಯಗಳ ಪ್ರಗತಿಯಲ್ಲ, ಅದು ವ್ಯಕ್ತಿಗತ ಹಾಗೂ ಸಾಮಾಜಿಕ ಸಮಾನತೆಯೊಂದಿಗೆ ನಡೆಯಬೇಕು. ಸಾಮಾಜಿಕ ನ್ಯಾಯವಿಲ್ಲದೆ ಅಭಿವೃದ್ಧಿಗೆ ಅರ್ಥವಿಲ್ಲ. ಅನೇಕ ಅವಕಾಶಗಳು ಇದ್ದರೂ ಕೂಡ ಅದು ಕೆಲವೊಂದು ಜಾತಿಗಳಿಗೆ ಮಾತ್ರ ಅವಕಾಶವಿದ್ದರೆ ಅದು ನ್ಯಾಯವಲ್ಲ. ಸಮಾನ ಅವಕಾಶವಿರುವಾಗ ಮಾತ್ರ ಹಿಂದುಳಿದವರು ಅಭಿವೃದ್ಧಿಯ ಒಳಗೊಂಡಾಗುತ್ತಾರೆಂದು ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ ಎರಡನ್ನು ಜೊತೆ ಜೊತೆಯಾಗಿ ತೆಗೆದುಕೊಂಡು ಹೋದಾಗ ಮಾತ್ರ ಅಭಿವೃದ್ಧಿ ಸಾಧ್ಯ. ಸಮಾನ ಅವಕಾಶ ಮತ್ತು ಸಾಮಾಜಿಕ ನ್ಯಾಯ ಬೇರೆ ಬೇರೆಯಾಗಿದ್ದು, ಸಮಾನ ಅವಕಾಶದಲ್ಲಿ ಎಲ್ಲರೂ ಪಾಲ್ಗೊಳ್ಳುತ್ತಾರೆ. ಆದರೆ ಸಾಮಾಜಿಕ ನ್ಯಾಯದಲ್ಲಿ ಯಾರಿಗೆ ಅದು ಅಗತ್ಯವೋ ಅವರು ಮಾತ್ರ ಪಾಲ್ಗೊಳ್ಳುತ್ತಾರೆ. ಆರ್ಥಿಕ ಅಭಿವೃದ್ಧಿಯನ್ನು ಅಭಿವೃದ್ಧಿ ಎನ್ನುವುದು ತಪ್ಪು. ಅದು ಸವಲತ್ತುಗಳನ್ನು ಮತ್ತು ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ. ನಾವು ಮನುಷ್ಯರನ್ನು ಮನುಷ್ಯರಾಗಿ ನೋಡಿದಾಗ ಸಾಮಾಜಿಕ ನ್ಯಾಯ ದೊರೆಯುತ್ತದೆಂದು ತಿಳಿಸಿದರು.

ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಹೆಚ್.ಡಿ. ಪ್ರಶಾಂತ್ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತಾನಾಡಿದರು, ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಡಾ. ಜನಾರ್ದನ ಅವರು ಕಾರ್ಯಕ್ರಮವನ್ನು ವಂದಿಸಿದರು.

ಚರಿತ್ರೆ ವಿಭಾಗ ಹಿರಿಯ ಪ್ರಾಧ್ಯಾಪಕರಾದ ಡಾ. ಕೆ. ಮೋಹನ್ ಕೃಷ್ಣ ರೈ, ವಿವಿಧ ನಿಕಾಯದ ಡೀನರು, ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande