ವೃತ್ತಿಪರ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಹಾಸನ, 2 ಆಗಸ್ಟ್ (ಹಿ.ಸ.): ಆ್ಯಂಕರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಬೆಂಗಳೂ
ವೃತ್ತಿಪರ ತರಬೇತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ


ಹಾಸನ, 2 ಆಗಸ್ಟ್ (ಹಿ.ಸ.):

ಆ್ಯಂಕರ್:

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ವೃತ್ತಿಪರ ತರಬೇತಿಯನ್ನು ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್, ಬೆಂಗಳೂರು ಇಲ್ಲಿ ನೀಡಲಾಗುತ್ತಿದ್ದು ಹಾಗೂ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ, ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನರ್, ಗ್ರೂಪ್-‘ಸಿ’ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿಗಳಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದು, ಆ.02 ಕೊನೆಯ ದಿನಾಂಕ ನಿಗಧಿಪಡಿಸಲಾಗಿತ್ತು. ಆದರೆ ಮೇಲ್ಕಂಡ ಎರಡು ತರಬೇತಿಗಳಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಆ.11 ರವರೆಗೆ ವಿಸ್ತರಿಸಲಾಗಿದೆ.

ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ನಲ್ಲಿ ಸದರಿ ದಿನಾಂಕದವರೆಗೆ ಅರ್ಜಿ ಸಲ್ಲಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172-268373/08172-267373 ಗೆ ಸಂರ್ಪಕಿಸಬಹುದಾಗಿದೆ. ಅಥವಾ

ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande