ಹೊಸಪೇಟೆ : ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ
ಹೊಸಪೇಟೆ, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಹೊಸಪೇಟೆ ನಗರ ವಿಭಾಗದ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್.03 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಕಾರ್ಯ ಮತ್ತು
ಹೊಸಪೇಟೆ : ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ


ಹೊಸಪೇಟೆ, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹೊಸಪೇಟೆ ನಗರ ವಿಭಾಗದ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್.03 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನ (ನಗರ ವಿಭಾಗ) ಕಾರ್ಯನಿರ್ವಾಹಕ ಅಭಿಯಂತರ ಕೆ.ಸತೀಶ್ ತಿಳಿಸಿದ್ದಾರೆ.

33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ಬಸವೇಶ್ವರ ಬಡವಣೆ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್, ಡಾ.ಪುನೀತ್ ರಾಜಕುಮಾರ್ ಸರ್ಕಲ್, ರಾಜೀವ ನಗರ, ರೈಲ್ವೆ ಸ್ಟೇಷನ್, ಅಮರಾವತಿ, ಚಿತ್ತವಾಡಗಿ, ಶುಗರ್ ಫ್ಯಾಕ್ಟರಿ, ಹಂಪಿ ರೋಡ್, ಗಣೇಶ ಗುಡಿ, ನೌಕರ ಕಾಲೋನಿ, ಗಾಂಧಿ ಸರ್ಕಲ್, ಬಸ್ ಸ್ಟ್ಯಾಂಡ್, ಮೇನ್ ಬಜಾರ್, ಕೋರ್ಟ್, ರಾಣಿಪೇಟೆ, ಭಟ್ರಹಳ್ಳಿ, ಬೆನಕಾಪುರ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಜೆಸ್ಕಾಂ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande