ಬೆಂಗಳೂರು, 02 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಟಿ ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 13 ಜನರನ್ನು ಗುರುತಿಸಲಾಗಿದ್ದು, ಅವರಲ್ಲಿ 11 ಮಂದಿಯನ್ನು ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪೋಷ್ಟ ಮಾಡಲಾದ ಸಂದೇಶಗಳನ್ನು ಪರಿಶೀಲನೆಗೆ ಒಳಪಡಿಸಿ, ಇನ್ನುಳಿದವರ ವಿರುದ್ಧವೂ ತನಿಖೆ ಮುಂದುವರಿದಿದೆ.
ಆರೋಪಿಗಳ ಹಿಂದಿನ ನಡವಳಿಕೆ, ಹಾಗೂ ಅವರು ಯಾರ ಅಭಿಮಾನಿಗಳು ಎಂಬುವುದರ ಕುರಿತು ತನಿಖೆ ನಡೆಯುತ್ತಿದೆ. “ಯಾರೇ ಆಗಲಿ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಅಥವಾ ಅಶ್ಲೀಲ ಸಂದೇಶ ಹರಡಿದರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಆಯುಕ್ತರು ಎಚ್ಚರಿಸಿದರು.
ಸೈಬರ್ ಅಪರಾಧ ನಿಯಂತ್ರಣಕ್ಕಾಗಿ ವಿಶೇಷವಾಗಿ ಸೈಬರ್ ಪೊಲೀಸರಿಗೆ ತರಬೇತಿ ನೀಡಲಾಗಿದ್ದು, ಈ ರೀತಿಯ ಪ್ರಕರಣಗಳಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa