ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಭಾಗವಹಿಸಿ : ರಾಜೇಶ್ವರಿ ಬಿ.
ಬಳ್ಳಾರಿ, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾನಪದ ಸಂಗೀತ ಕಾರ್ಯಕ್ರಮಗಳು ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ವರಿ.ಬಿ ಅವರು ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇ
ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಭಾಗವಹಿಸಿ: ರಾಜೇಶ್ವರಿ.ಬಿ


ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಭಾಗವಹಿಸಿ: ರಾಜೇಶ್ವರಿ.ಬಿ


ಬಳ್ಳಾರಿ, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಾನಪದ ಸಂಗೀತ ಕಾರ್ಯಕ್ರಮಗಳು ಕಲಾವಿದರಿಗೆ ವೇದಿಕೆಯನ್ನು ಕಲ್ಪಿಸುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಶ್ವರಿ.ಬಿ ಅವರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಕೋಟೆಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿಯ ವಿದ್ಯಾರ್ಥಿನಿಯರಿಗೆ “ಜಾನಪದ ಸಂಗೀತ” ಕಲಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಜೀವನಾಡಿಯಂತಿರುವ ದೇಶಿಯ ಕಲೆ ಉಳುವಿಗೆ ಹಾಗೂ ನಮ್ಮ ಸಂಸ್ಕøತಿಯನ್ನು ಬಿಂಬಿಸುವ ಮೂಲ ಜಾನಪದ ಸಂಗೀತ ಇತ್ತೀಚೆಗೆ ನೇಪಥ್ಯಕ್ಕೆ ಸರಿಯುತ್ತಿರುವುದು ಕಳವಳಕಾರಿಯಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಇಂತಹ ತರಬೇತಿ ಕಾರ್ಯಕ್ರಮಗಳನ್ನು ನೀಡಿ ಪ್ರೋತ್ಸಾಹಿಸುತ್ತದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಕಲೆಗಳಲ್ಲಿ ಭಾಗವಹಿಸಿ ನಿಮ್ಮನ್ನು ನೀವು ಗುರುತಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ನಶಿಸಿಹೋಗುತ್ತಿರುವ ಕಲೆಗಳನ್ನು ಮರುಕಳಿಸಲು ಈ ಕಲಿಕಾ ತರಬೇತಿಯನ್ನು ಆಯೋಜಿಸಲಾಗಿದೆ .ಈ ತರಬೇತಿಯು 6 ತಿಂಗಳು ಕಾಲ ನಡೆಯಲಿದ್ದು, ವಾರಕ್ಕೆ ಮೂರು ದಿನದಂತೆ 2 ಗಂಟೆಗಳ ಅವಧಿ ತರಬೇತಿ ನೀಡಲಾಗುತ್ತದೆ. ಆಸಕ್ತಿ ಹೊಂದಿದ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬಹುದು ಎಂದು ಕರೆ ನೀಡಿದರು.

ಚಿಗುರು ಕಲಾ ತಂಡದ ಜಾನಪದ ಗಾಯಕ ಹಾಗೂ ತರಬೇತುದಾರ ಎಸ್.ಎಂ.ಹುಲುಗಪ್ಪ ಅವರು ಮಾತನಾಡಿ, ಶಿಕ್ಷಣದಲ್ಲಿ ಸಂಗೀತ ಕಲಿಸಿದಂತೆ, ಜಾನಪದ ಕಲೆಯನ್ನು ಒಂದು ವಿಷಯವನ್ನಾಗಿ ಪ್ರಾಥಮಿಕ ಹಂತದಿಂದಲೇ ಬೋಧನೆ ಮಾಡಬೇಕು. ಮರೆಯಾಗುತ್ತಿರುವ ಜಾನಪದ ಕಲೆ ಮುಂದಿನ ಪೀಳಿಗೆಯವರಿಗೆ ಪರಿಚಯವಾಗಲಿದೆ. ಜಾನಪದ ಸಂಗೀತದ ಮೂಲಕ ಜಾನಪದ ಕಲೆಗಳನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗಲು ವಿದ್ಯಾವಂತರ ಪಾತ್ರ ಅಮೋಘವಾಗಿದೆ ಎಂದರು.

ಬಳಿಕ ಚಿಗುರು ಕಲಾ ತಂಡದಿಂದ ವಿದ್ಯಾರ್ಥಿನಿಯರಿಗೆ “ಜಾನಪದ ಸಂಗೀತ” ಕಲಿಕಾ ತರಬೇತಿ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕರಾದ ಉಷಾ ಕುಮಾರಿ, ನಿಲಯ ಪಾಲಕರಾದ ಸ್ವಪ್ನ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande