ಬೆಂಗಳೂರು, 02 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ದೋಷಿ ಎಂದು ತೀರ್ಪು ನೀಡಿದ್ದು, ಶಿಕ್ಷೆ ಪ್ರಮಾಣ ಪ್ರಕಟ ಮಧ್ಯಾಹ್ನ ೨.೪೫ಕ್ಕೆ ಮುಂದೂಡಲಾಗಿದೆ.
ಆರೋಪಿಗೆ ಗರಿಷ್ಠ ಶಿಕ್ಷೆ ವಿಧಿಸುವಂತೆ ವಿಶೇಷ ಸರಕಾರಿ ಅಭಿಯೋಜಕ ಜಗದೀಶ್ ವಾದ ಮಂಡಿಸಿದ್ದಾರೆ. ಪ್ರತಿವಾದ ಮಂಡಿಸಿದ ಪ್ರಜ್ವಲ್ ಪರ ವಕೀಲರು ಕಡಿಮೆ ಶಿಕ್ಷೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು.
ಇದೇ ವೇಳೆ ಪ್ರಜ್ವಲ್ ಹೇಳಿಕೆ ನ್ಯಾಯಾಧೀಶರು ಆಲಿಸಿದರು ಈ ಸಂಧರ್ಭದಲ್ಲಿ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟಿದ್ದು ಶಿಕ್ಷೆ ಪ್ರಮಾಣ ಕಡಿಮೆ ನೀಡಿ ಎಂದು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa