ಕುರಿ ಸಾಕಾಣಿಕೆ, ಶೆಡ್ ನಿರ್ಮಾಣಕ್ಮೆ ಸಾಲ ಒದಗಿಸಿ : ಗದ್ದಿಗೌಡರ
ವಿಜಯಪುರ, 02 ಆಗಸ್ಟ್ (ಹಿ.ಸ.) : ಆ್ಯಂಕರ್ : ಕುರಿ ಸಾಕಾಣಿಕೆ ಹಾಗೂ ಶೆಡ್ ನಿರ್ಮಾಣಕ್ಕೆ ಬ್ಯಾಂಕುಗಳು ಸಾಲ ಒದಗಿಸುವ ಕಾರ್ಯವಾಗಬೇಕೆಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದರು. ಬಾಗಲಕೋಟೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶನಿವಾರ ಜರುಗಿದ ಜಿಲ್ಲಾ ಅಗ್ರಣಿ ಬ್ಯಾಂಕನ ಡಿಸಿಸಿ, ಡಿ.ಎಲ್.ಆರ್.
ಸಭೆ


ವಿಜಯಪುರ, 02 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕುರಿ ಸಾಕಾಣಿಕೆ ಹಾಗೂ ಶೆಡ್ ನಿರ್ಮಾಣಕ್ಕೆ ಬ್ಯಾಂಕುಗಳು ಸಾಲ ಒದಗಿಸುವ ಕಾರ್ಯವಾಗಬೇಕೆಂದು ಸಂಸದ ಪಿ.ಸಿ.ಗದ್ದಿಗೌಡರ ತಿಳಿಸಿದರು.

ಬಾಗಲಕೋಟೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶನಿವಾರ ಜರುಗಿದ ಜಿಲ್ಲಾ ಅಗ್ರಣಿ ಬ್ಯಾಂಕನ ಡಿಸಿಸಿ, ಡಿ.ಎಲ್.ಆರ್.ಸಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ದುಡಿಯುವ ಕೈಗಳಿಗಳನ್ನು ಬಲಪಡಿಸುವ ಕೆಲಸವಾಗಬೇಕು ಅಂದಾಗ ಮಾತ್ರ ಅವರನ್ನು ಅರ್ಥಿಕವಾಗಿ ಬೆಳೆಯಲು ಸಾದ್ಯವಾಗುತ್ತದೆ ಎಂದರು.

ಕೇಂದ್ರ‌ ಸರಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳಿಸಿ. ಪ್ರತಿಯೊಂದು ಬ್ಯಾಂಕ್ ಖಾತೆಗಳು ಇ-ಕೆವೈಸಿಗೆ ಒಳಪಡಿಸುವ ಕಾರ್ಯ ಆಗಸ್ಟ ಮಾಹೆಯಲ್ಲಿ ಪೂರ್ಣಗೊಳಿಸಲು ಸೂಚಿಸಿದರು. ಸಾಲ ಮಂಜೂರಾತಿಯಲ್ಲಿ ಕಾಲಮಿತಿಯಲ್ಲಿ ಅನುಮೋದನೆ ನೀಡಬೇಕು. ಅಲೆದಾಡಿಸುವ ಕೆಲಸವಾಗಬಾರದು ಎಂದರು.

ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಯಲ್ಲಿರುವ ಅರ್ಹ ಫಲಾನುಭವಿಗಳಿಗೆ ಉಪಜೀವನಕ್ಕೆ ಸ್ವಯಂ ಉದ್ಯೋಗ ಕೈಗೊಳ್ಳಲು ಬ್ಯಾಂಕಗಳು ಸಾಲ ಕೊಡಲು ಮುಂದಾಗಬೇಕು. ಇಲ್ಲವಾದರೆ ಅವರು ತಮ್ಮ ಆರ್ಥಿಕ‌ ಮಟ್ಟ ಸುಧಾರಿಸಲು ಸಾದ್ಯವಾಗುವದಿಲ್ಲವೆಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ‌ ಕುರೇರ್ ಮಾತನಾಡಿ ಇಲಾಖೆಯ ಯೋಜನೆಗಳ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಸಾಲ‌‌ಸೌಲಭ್ಯಕ್ಕಾಗಿ ಬ್ಯಾಂಕ್ ಗೆ ಪಟ್ಟಿಯನ್ನು ಸಲ್ಲಿಸಲಾಗುತ್ತಿದೆ. ಅವರಿಗೆ ಸರಿಯಾದ ಸಮಯದಲ್ಲಿ ಸಾಲ‌ಮಂಜೂರಾತಿ ಆಗುತ್ತಿಲ್ಲ. ಈ ಬಗ್ಗೆ ಬ್ಯಾಂಕುಗಳು ಕ್ರಮವಹಿಸಬೇಕು. ಬಾಕಿ ಉಳಿಸಿಕೊಂಡ ಬ್ಯಾಂಕಗಳಿಗೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande