ಆಗಸ್ಟ್ 22 ರಂದು ಬೆಂಗಳೂರಿನಲ್ಲಿ ಸೌಹಾರ್ದ ಸಂಯುಕ್ತ ಸರ್ವ ಸದಸ್ಯರ ಸಭೆ
ಬಳ್ಳಾರಿ, 2 ಆಗಸ್ಟ್ (ಹಿ.ಸ.) ಆ್ಯಂಕರ್: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ 25ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯು ಆಗಸ್ಟ್ 22ರ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜಿ. ನಂಜನಗೌಡ ಅವರು ತಿಳಿಸಿದ್ದಾರೆ. ಸುದ್ದಿಗಾರರಿಗೆ ಶನಿವಾರ ಈ ಮಾಹಿತಿ ನೀಡಿದ ಅ
ಆಗಸ್ಟ್ 22 ರಂದು ಬೆಂಗಳೂರಿನಲ್ಲಿ ಸೌಹಾರ್ದ ಸಂಯುಕ್ತ ಸರ್ವ ಸದಸ್ಯರ ಸಭೆ


ಬಳ್ಳಾರಿ, 2 ಆಗಸ್ಟ್ (ಹಿ.ಸ.)

ಆ್ಯಂಕರ್:

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ 25ನೇ ವರ್ಷದ ಸರ್ವ ಸದಸ್ಯರ ವಾರ್ಷಿಕ ಸಭೆಯು ಆಗಸ್ಟ್ 22ರ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜಿ. ನಂಜನಗೌಡ ಅವರು ತಿಳಿಸಿದ್ದಾರೆ.

ಸುದ್ದಿಗಾರರಿಗೆ ಶನಿವಾರ ಈ ಮಾಹಿತಿ ನೀಡಿದ ಅವರು, 01 ಜನವರಿ 2025ಕ್ಕೆ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಗೆ ಬಂದು 25 ವರ್ಷಗಳಾಗಿದ್ದು, ರಜತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಕರ್ನಾಟಕದಲ್ಲಿರುವ 5298 ಸಹಕಾರಿ ಸಂಸ್ಥೆಗಳು ಸೇರಿ, ಬಳ್ಳಾರಿ ಜಿಲ್ಲೆಯ 112 ಸೌಹಾರ್ದ ಸಹಕಾರಿಗಳು ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ ಎಂದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ನಿರ್ದೇಶಕರಾದ ಹನುಮಂತಯ್ಯ ಶೆಟ್ಟಿ, ಶ್ರೀ ಶರಣ ಸಕ್ಕರೆ ಕರಡೀಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಕಲ್ಗುಡಿ ಮಂಜುನಾಥ, ಮೇಘಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಮತ್ತು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದ ಪ್ರಾಂತೀಯ ವ್ಯವಸ್ಥಾಪಕ ಸೂರ್ಯಕಾಂತ ರ್ಯಾಕಲೇ ಅವರು ಈ ಸಂದರ್ಭದಲ್ಲಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande